ಎಸ್ಸೆಸ್ಸೆಫ್ ದ.ಕ ವೆಸ್ಟ್ ಝೋನ್ ಝಾಕ್ವಿಕ್ ಕ್ಯೂ ಟೀಮ್ ಕ್ಯಾಂಪ್
ಕೊಣಾಜೆ: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯ ಸಕ್ರೀಯ ಕಾರ್ಯಕರ್ತರ ತಂಡವಾದ ಕ್ಯೂ ಟೀಮ್ ಕ್ರಿಯಾಶೀಲತೆಗೆ ಎಸ್ಸೆಸ್ಸೆಫ್ ದ.ಕ ವೆಸ್ಟ್ ಝೋನ್ ಝಾಕ್ವಿಕ್ ಕ್ಯೂ ಟೀಮ್ ಮೆಂಬರ್ಸ್ ಮೀಟ್ ಕಾರ್ಯಕ್ರಮವು ಎಸ್ಸೆಸ್ಸೆಫ್ ದ.ಕ ವೆಸ್ಟ್ ಝೋನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ರವರ ಅಧ್ಯಕ್ಷತೆಯಲ್ಲಿ ಅಲ್- ಮದೀನಾ ಹಾಲ್ ತಿಬ್ಲೆಪದವುವಿನಲ್ಲಿ ನಡೆಯಿತು.
ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸದಸ್ಯ ಸಯ್ಯದ್ ಖುಬೈಬ್ ತಂಙಳ್ ರವರ ದುಆ: ಮಾಡಿದರು.
ಕಾರ್ಯಕ್ರಮವನ್ನು ಅಲ್- ಮದೀನಾ ಇಂಗ್ಲೀಷ್ ಮೆಡಿಯಂ ಸ್ಕೂಲ್ ಡೈರಕ್ಟರ್ ಮಹಮ್ಮದ್ ಕುಂಞಿ ಅಂಜದಿ ಉದ್ಘಾಟಿಸಿದರು.
ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ಹಾಗೂ ರಾಜ್ಯ ಸದಸ್ಯರಾದ ನೌಫಲ್ ಸಖಾಫಿ ಕಳಸ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಅಗಮಿಸಿ ರಾಜ್ಯ ಸಮಿತಿಯ ಸಕ್ರೀಯ ಕಾರ್ಯಕರ್ತರ ತಂಡವಾದ ಕ್ಯೂ ಟೀಮ್ ನ ಕಾರ್ಯಾಚರಣೆಯ ಬಗ್ಗೆ ತರಗತಿ ನಡೆಸಿದರು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು,ದ.ಕ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ,ಕೋಶಾಧಿಕಾರಿ ಮಹಮ್ಮದ್ ಅಲಿ ತುರ್ಕಳಿಕೆರವರು ಸಂದೇಶ ಭಾಷಣ ಮಾಡಿದರು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಹುಸೈನ್ ಸ ಅದಿ ಹೊಸ್ಮಾರ್ ಎಸ್ಸೆಸ್ಸೆಫ್ ಮುಖವಾಣಿ ಇಶಾರ ಪತ್ರಿಕೆಯ ಸದಸ್ಯತನ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಸದಸ್ಯರಾದ ಶಾಕಿರ್ ಹಾಜಿ ಮಿತ್ತೂರು, ಮುಸ್ತಫಾ ಮಾಸ್ಟರ್ ಉಳ್ಳಾಲ,ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ,ಕಾರ್ಯದರ್ಶಿ ರಶೀದ್ ಹಾಜಿ ವಗ್ಗ,ಎಸ್ಸೆಸ್ಸೆಪ್ ಈಸ್ಟ್ ಝೋನ್ ಅಧ್ಯಕ್ಷ ಅಯ್ಯೂಬ್ ಮಹ್ಲರಿ ,ಪ್ರಧಾನ ಕಾರ್ಯದರ್ಶಿ ಶಫೀಕ್ ಮಾಸ್ಟರ್ ತಿಂಗಳಾಡಿ,ವೆಸ್ಟ್ ಝೋನ್ ಕೋಶಾಧಿಕಾರಿ ಝೈನುಲ್ ಆಬಿದ್ ನಯೀಮಿ,ಉಪಾಧ್ಯಕ್ಷರಾದ ಫಾರೂಕ್ ಸಖಾಫಿ ಕೃಷ್ಣಾಪುರ, ನವಾಝ್ ಸಖಾಫಿ ಅಡ್ಯಾರ್ ಪದವು,ವೆಸ್ಟ್ ಝೋನ್ ಕ್ಯೂ ಟೀಮ್ ಅಡ್ಮಿನ್ ಅಕ್ಬರ್ ಅಲಿ ಮದನಿ ಮುಂತಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ದ.ಕ ವೆಸ್ಟ್ ಝೋನ್ ಪ್ರಧಾನ ಕಾರ್ಯದರ್ಶಿ ಹೈದರಲಿ ಕಾಟಿಪಳ್ಳ ಸ್ವಾಗತಿಸಿದರು,ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ವಂದಿಸಿದರು
Comments
Post a Comment